ರಾಜ್ಯ ಸರ್ಕಾರದ ಆದೇಶ; ಅಗಸ್ಟ್ 15ಕ್ಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯ!
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಒಂದು ಗಮನಾರ್ಹವಾದ ಹಾಗೂ ಮೆಚ್ಚುಗೆಯ ನಿರ್ಣಯವನ್ನು ಕೈಗೊಂಡಿದೆ. ನಮ್ಮ ದೇಶದ ಸಂವಿಧಾನ ಶಿಲ್ಪಿ, ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ನೀಡಲು ಆಗಸ್ಟ್ 15 ರಂದು ಇನ್ನುಮುಂದೆ, ರಾಷ್ಟ್ರಪಿತ ಮಹಾತ್ಮ ಗಾಂಧಿಜಿ ಅವರ ಭಾವಚಿತ್ರದೊಂದಿಗೆ ಕಡ್ಡಾಯವಾಗಿ ಇಡಬೇಕು ಎಂದು ಆದೇಶ ನೀಡಿದೆ.
ಈ ಆದೇಶವು ಎಲ್ಲಾ ಸರ್ಕಾರಿ ಕಚೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳು, ಹಾಗೆಯೇ ಶಾಲಾ ಕಾಲೇಜುಗಳಿಗೂ ಕೂಡ ಅನ್ವಯವಾಗುತ್ತದೆ. ಇಲ್ಲಿಯವರೆಗೆ ಕೇವಲ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ಇಟ್ಟು ಸ್ವಾತಂತ್ರ್ಯೋತ್ಸವವನ್ನು ರಾಜ್ಯದಲ್ಲಿ ಆಚರಣೆ ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಕೂಡ ಗಾಂಧೀಜಿ ಅವರ ಸಮಾನವಾಗಿ ಪೂಜಿಸಲು ಸರ್ಕಾರ ನಿರ್ಧರಿಸಿದೆ.
ಈ ನಿರ್ಣಯವು ಕೇವಲ ಸರಕಾರಿ ಶಾಲಾ ಕಾಲೇಜುಗಳಿಗೆ ಮಾತ್ರ ಅನ್ವಯಿಸುತ್ತದೆಯೋ ಅಥವಾ ರಾಜ್ಯದಲ್ಲಿ ಇರುವ ಎಲ್ಲಾ ಸರಕಾರಿ ಹಾಗೂ ಖಾಸಗಿ ಸ್ವಾಮ್ಯದ ಶಾಲಾ ಕಾಲೇಜುಗಳಿಗೆ ಅನ್ವಯಿಸುತ್ತದೆಯೋ ಎಂಬ ಬಗ್ಗೆ ಸರ್ಕಾರ ವಿವರವಾಗಿ ತಿಳಿಸಬೇಕಿದೆ.