Bengaluru
ಜೈಲಿನಲ್ಲಿ ಕಣ್ಣೀರು ಹಾಕಿದ ಪವಿತ್ರಾ ಗೌಡ?!

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿ ಪವಿತ್ರಾ ಗೌಡ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕುಟುಂಬ ಸದಸ್ಯರು ಯಾರೂ ನನ್ನನ್ನು ನೋಡಲು ಬಂದಿಲ್ಲ ಎಂದು ಜೈಲಿನಲ್ಲಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.
ನಿನ್ನೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ದರ್ಶನ್ ಅವರನ್ನು ಭೇಟಿಯಾಗಲು ಬಂದಿದ್ದರು. ಆದರೆ ನನ್ನನ್ನು ನೋಡಲು ಯಾರೂ ಬಂದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದರ ಹಿನ್ನಲೆಯಲ್ಲಿ ಇಂದು ಪವಿತ್ರಾ ಗೌಡ ಅವರನ್ನು ಭೇಟಿ ಮಾಡಲು ಪುತ್ರಿ ಖುಷಿ, ತಂದೆ, ತಾಯಿ ಹಾಗೂ ಸಹೋದರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು.
ಈ ಸಂದರ್ಭದಲ್ಲಿ ಪವಿತ್ರಾ ಗೌಡ ಅವರಿಗೆ ಅಗತ್ಯ ಇರುವ ವಸ್ತುಗಳನ್ನು ತಂದು ನೀಡಿದ್ದಾರೆ ಎಂದು ಹೇಳಲಾಗಿದೆ. ಜೈಲು ಜೀವನ ಪವಿತ್ರಾ ಗೌಡ ಅವರಿಗೆ ಒಗ್ಗುತ್ತಿಲ್ಲ ಎಂಬ ಆಂತರಿಕ ಮಾಹಿತಿ ಕೂಡ ಲಭ್ಯವಾಗಿದೆ.