Politics

ಇನ್ನೂ 10 ದಿನದೊಳಗೆ ‘ಗೃಹ ಲಕ್ಷ್ಮಿ’ ಬಾಕಿ ಹಣ ಪಾವತಿ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆ ಆದಂತಹ ‘ಗೃಹ ಲಕ್ಷ್ಮಿ’ ಅಡಿಯಲ್ಲಿ ಪ್ರತಿ ತಿಂಗಳು ಪಾವತಿಸುವ ₹2000 ಹಣ ಕಳೆದ ಎರಡು ತಿಂಗಳುಗಳಿಂದ ಫಲಾನುಭವಿಗಳಿಗೆ ದೊರೆತಿರಲಿಲ್ಲ. ರಾಜ್ಯದ ಅನೇಕ ಮಹಿಳೆಯರು ಈ ಕುರಿತು ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು. ಕಾಂಗ್ರೆಸ್ ಬಳಿ ಗ್ಯಾರಂಟಿ ಯೋಜನೆಗಳ ನಿರ್ವಹಣೆಗೆ ಖಜಾನೆಯಲ್ಲಿ ಹಣವಿಲ್ಲ ಎಂದು ವಿರೋಧ ಪಕ್ಷಗಳು ಲೇವಡಿ ಮಾಡಿದ್ದವು.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶ್ರೀಮತಿ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೂ 10 ದಿನದೊಳಗೆ ‘ಗೃಹ ಲಕ್ಷ್ಮಿ’ಯೋಜನೆಯ ₹2000 ಹಣವನ್ನು ಫಲಾನುಭವಿಗಳಿಗೆ ಪಾವತಿ ಮಾಡಲಾಗುವುದು ಎಂದು ಹೇಳಿದರು. “ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ಣದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ.” ಎಂದು ಭರವಸೆ ನೀಡಿದ್ದಾರೆ.

Show More

Related Articles

Leave a Reply

Your email address will not be published. Required fields are marked *

Back to top button