Politics
ಮುಂದೂಡಿದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ.

ನವದೆಹಲಿ: ನರೇಂದ್ರ ಮೋದಿಯವರು ಭಾರತದ ಪ್ರಧಾನಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕಾರ ಮಾಡಲು ನಿಗದಿಪಡಿಸಿದ ದಿನಾಂಕ ಮುಂದೂಡಲಾಗಿದೆ. ಈ ಹಿಂದೆ ಜೂನ್ 08ರಂದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನೆರವೇರಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಬಂದಿರುವ ಮಾಹಿತಿಯ ಪ್ರಕಾರ ಜೂನ್ 09ರಂದು ಪ್ರಮಾಣವಚನ ಸಮಾರಂಭ ನಡೆಯಲಿದೆ.
ಸಮಾರಂಭದಲ್ಲಿ ವಿಶ್ವ ನಾಯಕರುಗಳು ಭಾಗವಹಿಸಲಿದ್ದಾರೆ. ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ, ಶ್ರೀಲಂಕಾ ದೇಶದ ರಾಷ್ಟ್ರಪತಿ ರಣೀಲ್ ವಿಕ್ರಮಸಿಂಘೆ, ನೇಪಾಳದ ಪ್ರಧಾನಿ ಪುಷ್ಪ ಕುಮಾರ್ ದಹಾಲ್ ಅವರು ಉಪಸ್ಥಿತರಿರುವರು. ಇದರೊಂದಿಗೆ ಇತರೆ 8000 ಗಣ್ಯ ವ್ಯಕ್ತಿಗಳ ದಂಡೇ ಇರಲಿದೆ.
ಇತ್ತ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಸಹ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಮುಂದೂಡಿದ್ದಾರೆ. ಜೂನ್ 09 ಕ್ಕೆ ನಿಗದಿಯಾಗಿದ್ದ ಈ ಕಾರ್ಯಕ್ರಮ ಜೂನ್ 12ಕ್ಕೆ ಮುಂದೂಡಲಾಗಿದೆ.