CinemaEntertainment
ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಫೇಕ್ ಸುದ್ದಿ. ವೈರಲ್ ಆದ ಪೋಟೋ.

ಬೆಂಗಳೂರು: ಕನ್ನಡ ಚಿತ್ರರಂಗದ ಜೂನಿಯರ್ ಡೈನಾಮಿಕ್ ಸ್ಟಾರ್ ಪ್ರಜ್ವಲ್ ದೇವರಾಜ್ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಪ್ರಜ್ವಲ್ ದೇವರಾಜ್ ಇನ್ನಿಲ್ಲ’ ಎಂಬ ಪೋಟೋ ನೋಡಿದ ಅಭಿಮಾನಿಗಳು ಕಂಗಾಲಾಗಿದ್ದಾರೆ. ಹಾಗಾದರೆ ಆಗಿದ್ದಾದರೂ ಏನು?
ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹರಿಬಿಟ್ಟಿದ್ದಾರೆ. ಪ್ರಜ್ವಲ್ ದೇವರಾಜ್ ಅವರ ಕುಟುಂಬದವರು ಈ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಆರೋಗ್ಯವಾಗಿ ಹಾಗೂ ಕ್ಷೇಮವಾಗಿ ಇದ್ದಾರೆ ಎಂದು ತಿಳಿಸಿದ್ದಾರೆ. ಪ್ರಜ್ವಲ್ ದೇವರಾಜ್ ಅವರ ಪೋಟೋವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಕಿಡಿಗೇಡಿಗಳು ಪ್ರಜ್ವಲ್ ಅವರ ಆರೋಗ್ಯದ ಕುರಿತು ಅನಗತ್ಯ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಾರೆ. ಈ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡುವ ನಿರ್ಧಾರ ಮಾಡಿದ್ದಾರೆ.