CinemaEntertainment
ಮತ್ತೊಂದು ಮಗುವಿನ ಆಗಮನಕ್ಕೆ ಸಿದ್ಧರಾದ ಪ್ರಣಿತಾ ಸುಭಾಷ್.

ಬೆಂಗಳೂರು: ಸ್ಯಾಂಡಲ್ ವುಡ್ ಬೆಡಗಿ, ಶ್ವೇತ ಸುಂದರಿ ಪ್ರಣಿತಾ ಸುಭಾಷ್ ಅವರು ತಮ್ಮ ಮತ್ತೊಂದು ಮಗುವಿನ ಆಗಮನಕ್ಕೆ ಸಿದ್ಧರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಂಚಿಕೊಂಡಿರುವ ಇವರು, “Round 2… Pant don’t fit anymore” ಎಂದು ಹೇಳಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪೊರ್ಕಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪ್ರಣಿತಾ ಅವರು, ತಮ್ಮ ಸೌಂದರ್ಯ ಹಾಗೂ ಅಚ್ಚುಕಟ್ಟಾದ ಅಭಿನಯದ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಕನ್ನಡ ಅಷ್ಟೇ ಅಲ್ಲದೆ ಬಹು ಭಾಷೆಗಳಲ್ಲಿ ತನ್ನ ಕಲೆಯನ್ನು ಪ್ರದರ್ಶಿಸಿದ್ದಾರೆ. ಚಿತ್ರರಂಗ ಅಷ್ಟೇ ಅಲ್ಲದೆ, ಸಮಾಜ ಕಲ್ಯಾಣ ಕಾರ್ಯಗಳಲ್ಲಿ ಸಹ ಅವರು ತೊಡಗಿದ್ದಾರೆ.
ಉದ್ಯಮಿ ನಿತಿನ್ ರಾಜು ಅವರನ್ನು ಮದುವೆಯಾದ ಪ್ರಣೀತಾ ಅವರಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಈಗ ರೌಂಡ್ 2 ಎಂದು ಹೇಳಿ, ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದ್ದಾರೆ ಪ್ರಣಿತಾ.