Blog
ಪಂಜಾಬ್ ರಾಜ್ಯಪಾಲ ಸ್ಥಾನಕ್ಕೆ ರಾಜಿನಾಮೆ ನೀಡಿದ ಭನ್ವರಿಲಾಲ್ ಪುರೋಹಿತ್ .

ಪಂಜಾಬ್ ರಾಜ್ಯದ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಆಡಳಿತಾಧಿಕಾರಿಯಾದ ಭನ್ವರಿಲಾಲ್ ಪುರೋಹಿತ್ ಅವರು ಇಂದು ಶನಿವಾರ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದಾರೆ.

ರಾಷ್ಟ್ರಪತಿಯವರಿಗೆ ಸಲ್ಲಿಸಿದ ರಾಜಿನಾಮೆ ಪತ್ರದಲ್ಲಿ “ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳ ಕಾರಣ, ನಾನು ಪಂಜಾಬ್‌ನ ರಾಜ್ಯಪಾಲ ಮತ್ತು ಕೇಂದ್ರಾಡಳಿತ ಪ್ರದೇಶ, ಚಂಡೀಗಢದ ಆಡಳಿತಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ” ಎಂದು ಬನ್ವಾರಿಲಾಲ್ ಪುರೋಹಿತ್ ಅವರು ಬರೆದಿದ್ದಾರೆ.
ಪುರೋಹಿತ್ ಅವರು 2021ರಿಂದ ಪಂಜಾಬ್ ರಾಜ್ಯಪಾಲ ಹಾಗೂ ಚಂಡೀಗಢದ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮೊದಲು ಅವರು ತಮಿಳುನಾಡಿನ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.