ವಯನಾಡ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಇಂದು ನಾಮನಿರ್ದೇಶನ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹ ಇವರು ವಯನಾಡಿನಿಂದ ಗೆದ್ದು ಸಂಸದರಾಗಿದ್ದರು.
ನಾಮನಿರ್ದೇಶನ ಸಲ್ಲಿಕೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ರಾಹುಲ್ ಗಾಂಧಿಯವರ ಸಹೋದರಿಯಾದ ಪ್ರಿಯಾಂಕಾ ಗಾಂಧಿ ವಾದ್ರ ಅವರು ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ರಾಹುಲ್ ಗಾಂಧಿಯವರು ಈ ಬಾರಿ ಅಮೇಥಿ ಕ್ಷೇತ್ರದಿಂದಲೂ ಕೂಡ ಸ್ಪರ್ಧೆ ಮಾಡಲಿದ್ದಾರೆ ಎಂಬ ವದಂತಿ ಕೂಡ ಕೇಳಿಬಂದಿದೆ.