India
ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ಅಪಘಾತ.

ಕೊಲ್ಕತ್ತಾ: ಪಶ್ಚಿಮ ಬಂಗಾಳದ ರಂಗಪಾಣಿ ರೈಲ್ವೆ ನಿಲ್ದಾಣದ ಹತ್ತಿರ ಇಂದು ಕಾಂಚನಜುಂಗ ಎಕ್ಸ್ ಪ್ರೆಸ್ ರೈಲಿಗೆ, ಸರಕುಗಳನ್ನು ಹೊತ್ತು ಬರುತ್ತಿದ್ದ ಗೂಡ್ಸ್ ರೈಲು ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಕಾರಣ, ಸ್ಥಳದಲ್ಲೇ ಮೂರು ಮಂದಿ ಮೃತಪಟ್ಟಿದ್ದರೆ, ಮೂವತ್ತು ಜನರು ಗಂಭೀರ ಗಾಯಗೊಂಡಿದ್ದಾರೆ.
ಡಿಕ್ಕಿಯ ರಭಸಕ್ಕೆ ಮೂರು ಬೋಗಿಗಳು ಪಲ್ಟಿ ಹೊಡೆದು, ಹಳಿ ತಪ್ಪಿ ಬಿದ್ದಿದೆ. ರಕ್ಷಣಾ ಕಾರ್ಯಾಚರಣೆ ಚುರುಕಿನಿಂದ ನಡೆದಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಕೂಡ ತಮ್ಮ ಎಕ್ಸ್ ಖಾತೆಯಲ್ಲಿ “ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿ ಅವಲೋಕಿಸಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.