Bengaluru

ರಾಜ್ಯದಲ್ಲಿ ಮುಂದುವರೆದ ವರುಣಾರ್ಭಟ; ಯಾವ ಜಿಲ್ಲೆಗೆ ರೆಡ್ ಅಲರ್ಟ್?

ಉತ್ತರ ಕನ್ನಡ: ರಾಜ್ಯದಲ್ಲಿ ವರುಣನ ರೌದ್ರವತಾರ ಹೆಚ್ಚಾಗುತ್ತಿದ್ದು ಉತ್ತರ ಕನ್ನಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತರಕ್ಷಣೆಗಾಗಿ ಗುರುವಾರ ರೆಡ್ ಅಲರ್ಟ್ ಹಾಗೂ 28 ಮತ್ತು 29 ರವರೆಗೆ ಈ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ.

ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ಇರಲಿದೆ.

ಕಳೆದ ಒಂದು ವಾರದಿಂದ ಈ ಜಿಲ್ಲೆಗಳಲ್ಲಿ ಬಿಟ್ಟು ಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಗಾಲದಲ್ಲಿ ಕರಾವಳಿ ಜಿಲ್ಲೆಗಳ ಸೌಂದರ್ಯ ಇನ್ನಷ್ಟು ಹೆಚ್ಚಾಗುತ್ತದೆ. ಆದರೂ ಸಹ ಅತಿಯಾದ ವರ್ಷಧಾರೆ ಎಂದಿಗೂ ಒಳಿತಲ್ಲ.

Show More

Related Articles

Leave a Reply

Your email address will not be published. Required fields are marked *

Back to top button