Sports
ಬಲಗೈ ವೇಗಿಗೆ, ವೇಗದ 150 ವಿಕೆಟುಗಳು.
ಭಾರತೀಯ ಕ್ರಿಕೆಟ್ ತಂಡದ ಬಲಗೈ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಇಂದು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ದಿನದಂದು ಬೆನ್ ಸ್ಟೋಕ್ಸ್ ಅವರ ವಿಕೆಟ್ ಪಡೆಯುವ ಮೂಲಕ, 150 ವಿಕೆಟುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಪಡೆದ ಮೊದಲ ಭಾರತೀಯ ವೇಗದ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಬುಮ್ರಾ ಅವರು 2017ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿದರು. ಪ್ರಸ್ತುತ ಅವರ ಬೌಲಿಂಗ್ ಸರಾಸರಿ 20.28 ಇದ್ದು, ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಆಟದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಜಸ್ಪ್ರೀತ್ ಬುಮ್ರಾರವರು.