IndiaNationalPolitics

ಹಿರಿಯ ಬಿಜೆಪಿ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು: ಆರೋಗ್ಯ ಬಗ್ಗೆ ತೀವ್ರ ನಿಗಾ…!

ನವದೆಹಲಿ: ಭಾರತ ರಾಜಕೀಯದ ದಿಗ್ಗಜ, 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯಾಧಿಕಾರಿಗಳ ಪ್ರಕಾರ, ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಸೂಕ್ಷ್ಮ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನ್ಯೂರಾಲಜಿಸ್ಟ್ ಡಾ. ವಿನೀತ್ ಸುರಿ ಅವರ ಮೇಲ್ವಿಚಾರಣೆಯಲ್ಲಿರುವ ಅಡ್ವಾಣಿ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಮೊದಲು ಸಹ ಅವರು ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಆಸ್ಪತ್ರೆಗೆ ದಾಖಲಾದ ಕಾರಣ ಇನ್ನೂ ಬಹಿರಂಗಗೊಂಡಿಲ್ಲ.

ಅಡ್ವಾಣಿಯ ರಾಜಕೀಯ ಸಾಧನೆ: ಭಾರತೀಯ ರಾಜಕಾರಣದ ಶಿಲ್ಪಿ
1927ರ ನವೆಂಬರ್ 8ರಂದು ಕರಾಚಿಯಲ್ಲಿ ಜನಿಸಿದ ಅಡ್ವಾಣಿ ಅವರು, ಕೇವಲ 14ನೇ ವಯಸ್ಸಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸೇರಿದರು. 1947ರ ವಿಭಜನೆಯ ನಂತರ ಅವರ ಕುಟುಂಬ ಭಾರತಕ್ಕೆ ವಲಸೆ ಹೋಯಿತು.

1951ರಲ್ಲಿ, ಅಡ್ವಾಣಿ ಅವರು ಶ್ಯಾಮಪ್ರಸಾದ ಮುಖರ್ಜಿ ಸ್ಥಾಪಿಸಿದ ಭಾರತೀಯ ಜನಸಂಘವನ್ನು ಸೇರಿದರು. 1970ರಲ್ಲಿ ರಾಜ್ಯಸಭೆಗೆ ಆಯ್ಕೆಯಾದ ಅವರು, 1972ರಲ್ಲಿ ಜನಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. 1975ರ ಅಪಾತಕಾಲದಲ್ಲಿ ಅಟಲ್ ಬಿಹಾರಿ ವಾಜಪೇಯಿಯವರೊಂದಿಗೆ ಬಂಧಿತರಾದ ಅಡ್ವಾಣಿ, 1977ರಲ್ಲಿ ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಾರ್ಟಿ ಸರ್ಕಾರದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಸೇವೆ ಸಲ್ಲಿಸಿದರು.

1980ರಲ್ಲಿ, ಭಾರತೀಯ ಜನತಾ ಪಾರ್ಟಿ (BJP) ಸ್ಥಾಪನೆಗೆ ಅವರು ಪ್ರಮುಖ ಪಾತ್ರ ವಹಿಸಿದರು. ಅಡ್ವಾಣಿ ಅವರ ರಾಮಜನ್ಮಭೂಮಿ ಹೋರಾಟ ಮತ್ತು ಅಯೋಧ್ಯೆ ರಾಮಮಂದಿರ ನಿರ್ಮಾಣದ ಪರ ನಿಲುವು ಬಿಜೆಪಿಗೆ ದೇಶಾದ್ಯಂತ ಜನಮೆಚ್ಚುಗೆ ತಂದುಕೊಟ್ಟಿತು. 1984ರ ಚುನಾವಣೆಯಲ್ಲಿ ಕೇವಲ 2 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ, ಅಡ್ವಾಣಿ ಅವರ ನೇತೃತ್ವದಲ್ಲಿ 1990ರ ದಶಕದಲ್ಲಿ ದೇಶಾದ್ಯಂತ ಸಶಕ್ತ ರಾಜಕೀಯ ಶಕ್ತಿಯಾಗಿ ಬೆಳೆದಿತು.

ಅಡ್ವಾಣಿ ಅವರ ಪ್ರಧಾನ ಮಂತ್ರಿ ಕನಸು:
2009ರ ಲೋಕಸಭಾ ಚುನಾವಣೆಯಲ್ಲಿ, ಅಡ್ವಾಣಿ ಅವರನ್ನು ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಯಿತು. ಆದರೆ, ಚುನಾವಣೆಯಲ್ಲಿ ಬಿಜೆಪಿ ಜಯದ ಮೆಟ್ಟಿಲು ಏರುವಲ್ಲಿ ವಿಫಲವಾಯಿತು.

ಬಿಜೆಪಿಯ ದಿಗ್ಗಜನ ಆರೋಗ್ಯ ವಿಚಾರದಲ್ಲಿ ನಿಗಾ
ಅಡ್ವಾಣಿ ಅವರ ಆರೋಗ್ಯದ ಕಾಳಜಿ ವಹಿಸಲಾಗುತ್ತಿದ್ದು, ದೇಶಾದ್ಯಂತ ಅವರ ಅರೋಗ್ಯಕ್ಕಾಗಿ ಪ್ರಾರ್ಥನೆಗಳು ನಡೆಯುತ್ತಿದೆ.

Show More

Leave a Reply

Your email address will not be published. Required fields are marked *

Related Articles

Back to top button