ಶಿರಾಡಿ ಘಾಟ್ ಭೂಕುಸಿತ: ಸಿಎಂ ಸಿದ್ದರಾಮಯ್ಯ ಸ್ಥಳ ಪರಿಶೀಲನೆ.
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಂದು ಶಿರಾಡಿ ಘಾಟ್ ನಲ್ಲಿ ಸಂಭವಿಸಿದ್ದ ಭೂಕುಸಿತವನ್ನು ವೀಕ್ಷಣೆ ಮಾಡಿದರು. ಸ್ಥಳ ಪರೀಕ್ಷೆಯ ಸಂದರ್ಭದಲ್ಲಿ, ಹೆದ್ದಾರಿ ನಿರ್ಮಾಣದ ಅವೈಜ್ಞಾನಿಕ ಕಾಮಗಾರಿಯ ಕುರಿತು ಅರಿತುಕೊಂಡ ಮುಖ್ಯಮಂತ್ರಿಗಳು, ನಿರ್ಲಕ್ಷ ಹಾಗೂ ಬೇಜವಾಬ್ದಾರಿಯಿಂದ ಕೂಡಿದ ಈ ಕಾಮಗಾರಿಯ ಕುರಿತು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಸರ್ಕಾರದಿಂದ ಪತ್ರ ಬರೆಯುವುದಾಗಿ ಹೇಳಿದ್ದಾರೆ.
ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದೆ. ಇದು ಗುಡ್ಡ ಕುಸಿತಕ್ಕೆ ಕಾರಣವಾಗಿದೆ. ಈ ಅಪಾಯವನ್ನು ತಡೆಯಲು ಗುಡ್ಡಗಳನ್ನು 30 ರಿಂದ 45 ಡಿಗ್ರಿಯಲ್ಲಿ ಕತ್ತರಿಸಿ ತಡೆಗೋಡೆ ನಿರ್ಮಿಸ ಬಹುದಿತ್ತು ಎಂದು ಸಿಎಂ ಹೇಳಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆಗಳನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಅಪಾರ ಪ್ರಮಾಣದ ಭೂಕುಸಿತಗಳು ಸಂಭವಿಸಿದ್ದು, ಅಪಾರ ಆಸ್ತಿ ಹಾಗೂ ಪ್ರಾಣ ಹಾನಿಗೆ ಕಾರಣವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಇರಬಹುದು, ಹಾಗೆಯೇ ಸಂಚಾರ ದಟ್ಟಣೆಯಿಂದ ಕೂಡಿರುವ ಶಿರಾಡಿ ಘಾಟ್ ನಲ್ಲಿ ಸಂಭವಿಸಿ ಭೂಕುಸಿತ ಇರಬಹುದು, ಇವೆಲ್ಲದಕ್ಕೂ ಅವೈಜ್ಞಾನಿಕ ರೀತಿಯ ರಸ್ತೆ ಕಾಮಗಾರಿ ಕಾರಣ ಎಂಬುದು ಸಾರಿ ಸಾರಿ ಹೇಳುತ್ತಿದೆ.