Politics
ಸಿದ್ದರಾಮಯ್ಯನವರೇ ನಮ್ಮ ಸಿಎಂ: ಸಚಿವ ಸತೀಶ್ ಜಾರಕಿಹೊಳಿ ಘೋಷಣೆ!
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯನವರು ಹೀಗೆಯೇ ಮುಂದುವರೆಯುವರು ಎಂಬ ಒಮ್ಮತ ಸಿಗುತ್ತಿರುವಂತೆಯೇ, ಸಚಿವ ಸತೀಶ್ ಜಾರಕಿಹೊಳಿ ಅವರ ಬಾಯಿಂದ ಬಂದ ಹೊಸ ಹೇಳಿಕೆ ಚರ್ಚೆಗೆ ಕಾರಣವಾಗಿದೆ. “ಸಿದ್ದರಾಮಯ್ಯ ನಾಯಕತ್ವ ರಾಜ್ಯದ ಪ್ರಗತಿಗೆ ಅಗತ್ಯ,” ಎಂದು ಜಾರಕಿಹೊಳಿ ಹೇಳಿದ್ದಾರೆ. ಈ ಮೂಲಕ ಅವರು, ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸುವ ಸಾಧ್ಯತೆಯನ್ನು ಬಲಗೊಳಿಸಿದೆ.
ಇತ್ತೀಚಿನ ದಿನಗಳಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಸಿಎಂ ಎಂದು ನೋಡಬೇಕೆಂಬ ಅಭಿಪ್ರಾಯಗಳು ಕೇಳಿಬರುತ್ತಿದ್ದರೂ, ಜಾರಕಿಹೊಳಿ ಅವರ ಸ್ಪಷ್ಟನೆ, ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನೇ ಮುಂದಿನ ನಾಯಕನಾಗಿ ಪರಿಗಣಿಸುತ್ತಿದೆ ಎಂಬುದಕ್ಕೆ ಬಲ ನೀಡಿದೆ.
ಈ ಹೇಳಿಕೆ, ಕಾಂಗ್ರೆಸ್ ಪಕ್ಷದ ಒಳಗಿನ ಗೊಂದಲಗಳಿಗೆ ತಾತ್ಕಾಲಿಕವಾಗಿ ಉತ್ತರ ನೀಡುವಂತೆ ಕಾಣುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಸಮನ್ವಯದ ಆಶಾವಾದ ಮೂಡಿಸುತ್ತಿದೆ.