India
ದೈವಾಧೀನರಾದ ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ್
ಕೋಲ್ಕತಾ: ರಾಮಕೃಷ್ಣ ಆಶ್ರಮದ 16ನೇ ಅಧ್ಯಕ್ಷರಾದ ಸ್ವಾಮಿ ಸ್ಮರಣಾನಂದ ಮಹಾರಾಜ ಅವರು ತಮ್ಮ 95ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಮಾರ್ಚ್ 26ರಂದು ಇಹಲೋಕ ತ್ಯಜಿಸಿದ್ದಾರೆ. 2017ರಲ್ಲಿ ಸ್ವಾಮೀಜಿಯವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದರು.
ಸ್ವಾಮೀಜಿಯವರನ್ನು ದಕ್ಷಿಣ ಕಲ್ಕತ್ತಾದಲ್ಲಿ ರಾಮಕೃಷ್ಣ ಆಶ್ರಮದ ವತಿಯಿಂದ ನಡೆಸುವ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಮಂಗಳವಾರ ಸ್ವಾಮಿಜಿಯವರು ದೈವಾಧೀನರಾದರು.
ಮಾರ್ಚ್ 5 ರಂದು ಕೋಲ್ಕತ್ತಾ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸ್ವಾಮೀಜಿಯವರನ್ನು ಭೇಟಿ ಮಾಡಿ ಅವರ ಆರೋಗ್ಯದ ಕುರಿತ ಮಾಹಿತಿಯನ್ನು ಪಡೆದಿದ್ದರು. ಪ್ರಧಾನಿ ಮೋದಿಯವರು ಸ್ವಾಮಿ ಸ್ಮರಣಂದ ಮಹಾರಾಜ್ ಅವರಿಗೆ ತಮ್ಮ ಎಕ್ಸ್ ಖಾತೆಯ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಿದ್ದಾರೆ.