Politics
ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ: 30 ಜನರನ್ನು ಬಂಧಿಸಿದ ದಾವಣಗೆರೆ ಪೋಲಿಸ್!
ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟದ ಘಟನೆಗೆ ಸಂಬಂಧಿಸಿ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ಸಂಜೆ ಚಾಮರಾಜಪೇಟೆ ವೃತ್ತದ ಬಳಿಯ ಮೆರವಣಿಗೆ ವೇಳೆ ಕೆಲ ವ್ಯಕ್ತಿಗಳು ಘೋಷಣೆಗಳನ್ನು ಕೂಗಿದ ಪರಿಣಾಮ, ಎರಡು ಗುಂಪುಗಳ ನಡುವೆ ವಾದ ಆರಂಭವಾಯಿತು. ಈ ವೇಳೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಇಬ್ಬರು ಕಾನ್‌ಸ್ಟೆಬಲ್‌ಗಳಿಗೆ ಗಾಯಗಳಾಗಿವೆ.
“ಘಟನೆಯ ನಂತರ ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಗಣೇಶ ಮೂರ್ತಿ ವಿಸರ್ಜನೆ ಶಾಂತವಾಗಿ ಮುಗಿಸಲಾಗಿದೆ. ಸಮರ್ಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ,” ಎಂದು ದಾವಣಗೆರೆ ಎಸ್‌ಪಿ ಉಮಾ ಪ್ರಸಾದ್ ತಿಳಿಸಿದ್ದಾರೆ.
ಈ ಘಟನೆಯ ಕುರಿತು ಐದು ಪ್ರಕರಣಗಳನ್ನು ದಾಖಲಿಸಲಾಗಿದ್ದು, 30 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.