IndiaPolitics

ಬಿಜೆಪಿಗೆ ಎಂಟ್ರಿ ಕೊಟ್ಟ ಸುಮಲತಾ ಅಂಬರೀಶ್.

ಮಂಡ್ಯ: 2019 ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವು ಸಾಧಿಸಿದ್ದ ‘ಮಂಡ್ಯದ ಗೌಡ್ತಿ’, ಶ್ರೀಮತಿ. ಸುಮಲತಾ ಅಂಬರೀಶ್, ಇಂದು ಪತ್ರಿಕಾಗೋಷ್ಠಿ ನಡೆಸಿ, ಮಹತ್ತರವಾದ ಘೋಷಣೆಯನ್ನು ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷವನ್ನು ಸೇರಿದ ಸುಮಲತಾ ಅಂಬರೀಶ್. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. “ಮಂಡ್ಯ ಬಿಟ್ಟು ಬೇರೆ ಕಡೆ ನನ್ನ ರಾಜಕೀಯ ಜೀವನವಿಲ್ಲ ಮಂಡ್ಯ ಮಣ್ಣಿನ ಸೊಸೆಯಾಗಿ ಜಿಲ್ಲೆಯ ಜನರ ಕೈ ಬಿಡಲು ನಾನು ಇಷ್ಟಪಡುವುದಿಲ್ಲ. ಈ ಮಂಡ್ಯದ ಋಣ ಮತ್ತು ಈ ಮಂಡ್ಯದ ಜನವನ್ನು ನಾನು ಎಂದಿಗೂ ಬಿಡುವುದಿಲ್ಲ ಎಂದು ಪ್ರಮಾಣ ಮಾಡಿ ಹೇಳುತ್ತೇನೆ.” ಎಂದು ಹೇಳಿದರು.

“ಪ್ರಧಾನಿ ನರೇಂದ್ರ ಮೋದಿಯವರ ದೇಶಪರ ಕಾಳಜಿ, ಕೆಲಸಗಳನ್ನು ಮೆಚ್ಚಿ, ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ.” ಎಂದು ಹೇಳಿದರು. ಈ ಸಂದರ್ಭದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಭಿಷೇಕ್ ಅಂಬರೀಶ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Show More

Related Articles

Leave a Reply

Your email address will not be published. Required fields are marked *

Back to top button