ಕನ್ನಡದ ಪವರ್ ಟಿವಿ ಪುನರ್ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ಅಸ್ತು.
ಬೆಂಗಳೂರು: ಕನ್ನಡದ ಸುದ್ದಿವಾಹಿನಿ ಪವರ್ ಟಿವಿ ಪರವಾನಿಗೆ ಇಲ್ಲದೆ ವಾಹಿನಿಯನ್ನು ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ, ಹೈಕೋರ್ಟ್ ಪವರ್ ಟಿವಿ ಪ್ರಸಾರಕ್ಕೆ ಕಳೆದ ಕೆಲವು ದಿನಗಳ ಹಿಂದೆ ನಿರ್ಬಂಧ ಹೇರಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ಈ ನಿರ್ಬಂಧಕ್ಕೆ ತಡೆಯಾಜ್ಞೆಯನ್ನು ತಂದಿದೆ. ಹಾಗಾಗಿ ಮತ್ತೆ ಪವರ್ ಟಿವಿ ಪುನರ್ ಪ್ರಸಾರವಾಗಲಿದೆ.
ಪವರ್ ಟಿವಿ ಸುದ್ದಿ ವಾಹಿನಿಯ ವಿರುದ್ಧ ಹಾಯ್ ಕೋರ್ಟ್ ಮೆಟ್ಟಿಲೇರಿದ್ದ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಹಾಗೂ ಮಾಜಿ ಎಂಎಲ್‌ಸಿ ರಮೇಶ್ ಗೌಡ ಅವರು, ಪವರ್ ಟಿವಿ ಸಂಸ್ಥೆಯು ಕಳೆದ 2021ರಿಂದ ಯಾವುದೇ ಪರವಾನಿಗೆಯನ್ನು ನವೀಕರಿಸದೆ ಸುದ್ದಿ ವಾಹಿನಿಯನ್ನು ನಡೆಸುತ್ತಿದ್ದಾರೆ ಎಂದು ಆರೋಪ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಹೈಕೋರ್ಟ್ ಸುದ್ದಿವಾಹಿನಿಯ ಪ್ರಸಾರಕ್ಕೆ ತಡೆಯಾಜ್ಞೆ ನೀಡಿತು. ಹೈಕೋರ್ಟ್ ತೀರ್ಪಿನ ವಿರುದ್ಧ ಪವರ್ ಟಿವಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಸುಪ್ರೀಂ ಕೋರ್ಟ್ ನಲ್ಲಿ ಪವರ್ ಟಿವಿ ಅವರ ಅರ್ಜಿಯನ್ನು ವಿಚಾರಣೆ ಮಾಡಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ, ಇದೊಂದು ರಾಜಕೀಯ ದ್ವೇಷದ ಕ್ರಮ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ತಮ್ಮ ತೀರ್ಪನ್ನು ನೀಡಿದರು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ನ್ಯಾಯಮೂರ್ತಿಗಳು ಒತ್ತಿ ಹೇಳಿದರು. ಹೀಗಾಗಿ ಇನ್ನು ಮುಂದೆ ಪವರ್ ಟಿವಿ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿದೆ.