India
ದೆಹಲಿಗೆ ನೀರು ಬಿಡಲು ಸುಪ್ರೀಂ ಆದೇಶ.
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಬಿಸಿ ಗಾಳಿಯ ಹೊಡೆತಕ್ಕೆ ಸಿಲುಕಿ ನೀರಿಗೂ ಹಾಹಾಕಾರ ಪಡುತ್ತಿದೆ. ಇದರ ಹಿನ್ನಲೆಯಲ್ಲಿ ದೆಹಲಿಗೆ ನೀರು ಬಿಡುವಂತೆ ನೆರೆಯ ರಾಜ್ಯವಾದ ಹಿಮಾಚಲ ಪ್ರದೇಶಕ್ಕೆ ನಿರ್ದೇಶಿಸಿದೆ ಸುಪ್ರೀಂ ಕೋರ್ಟ್.
ಪ್ರಸ್ತುತ ನೀರಿನ ಬಿಕ್ಕಟ್ಟಿನಿಂದ ಬಳಲುತ್ತಿರುವ ದೆಹಲಿಗೆ 137 ಕ್ಯೂಸೆಕ್ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಗುರುವಾರ ಸುಪ್ರೀಂ ಕೋರ್ಟ್ ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಪಿ.ಕೆ.ಮಿಶ್ರಾ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ರಜಾಕಾಲದ ಪೀಠವು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಸೂಚಿಸಿದೆ. ಹಿಮಾಚಲ ಪ್ರದೇಶದಿಂದ ಬಿಡುಗಡೆಯಾದ ಹೆಚ್ಚುವರಿ ನೀರು ರಾಷ್ಟ್ರ ರಾಜಧಾನಿಯನ್ನು ತಲುಪುವುದನ್ನು ಖಚಿತಪಡಿಸಿಕೊಳ್ಳಲು ಹರಿಯಾಣ ಸರ್ಕಾರಕ್ಕೆ ಪೀಠವು ನಿರ್ದೇಶನ ನೀಡಿದೆ.