Bengaluru

ಸ್ವಯಂ-ಉದ್ಯೋಗ ಮಾಡುವವರಿಗೆ, ಸರ್ಕಾರದಿಂದ ಸಾಲ-ಸಹಾಯಧನ.

ಬೆಂಗಳೂರು: ಸ್ವಯಂ ಉದ್ಯೋಗ ಮಾಡುವ ಮೂಲಕ ತಮ್ಮ ಕಾಲು ಮೇಲೆ ತಾವು ನಿಲ್ಲಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳಿಗೆ, ಸರ್ಕಾರ ₹ 1 ಲಕ್ಷ ನೇರ ಸಾಲ ಹಾಗೂ ಸಹಾಯಧನವನ್ನು ನೀಡಿ ಪ್ರೋತ್ಸಾಹಿಸುತ್ತಿದೆ. ಇದಕ್ಕೆ ಸರ್ಕಾರ ಅರ್ಜಿಯನ್ನು ಕೂಡ ಆಹ್ವಾನಿಸಿದೆ.

ಯಾರು ಈ ಯೋಜನೆ ಅಡಿ ಸಾಲ ಸೌಲಭ್ಯವನ್ನು ಪಡೆಯಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವೇನು? ಇತ್ಯಾದಿ ಪ್ರಶ್ನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಯೋಣ.

ಸ್ವಉದ್ಯೋಗ ನೇರ ಸಾಲ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?

  • ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ₹ 3 ಲಕ್ಷದ ಮಿತಿ ಒಳಗಿರಬೇಕು.
  • ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿನವರಾಗಿರಬೇಕು.
  • ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಬೇಕು.
  • ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
  • ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.
  • ಒಂದು ಕುಟುಂಬದಲ್ಲಿ ಒಂದು ಫಲಾನುಭವಿಯನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಈ ಯೋಜನೆ ಅಡಿ ಎಷ್ಟು ಸಹಾಯಧನ ಪಡೆಯಬಹುದು?

  • ಈ ಯೋಜನೆ ಅಡಿಯಲ್ಲಿ ನಿಗಮವು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ₹ 1 ಲಕ್ಷಗಳ ಆರ್ಥಿಕ ನೆರವನ್ನು ಒದಗಿಸಲಾಗುತ್ತದೆ. ಮತ್ತು ಈ ಮೊತ್ತದಲ್ಲಿ ಗರಿಷ್ಠ ₹20,000 ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ಗರಿಷ್ಠ ₹80,000 ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತದೆ.
  • ಘಟಕ ವೆಚ್ಚವು ಕನಿಷ್ಠ ₹50,000 ಹಾಗೂ ಈ ಮೊತ್ತಕ್ಕೆ ಸಹಾಯಧನವು ಕನಿಷ್ಠ ಅಂದರೆ ₹10,000 ಹಾಗೂ ಬಾಕಿ ಮೊತ್ತವಾದ ₹40,000 ನ್ನು ಶೇ.4ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.
  • ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ಹಾಗೂ ಇದರಲ್ಲಿ 2 ತಿಂಗಳು ವಿರಾಮ ಅವಧಿ ಇರುತ್ತದೆ.

ಈ ಯೋಜನೆ ಅಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಾರಂಭ ದಿನ 12.07.2024 ಹಾಗೂ ಕೊನೆಯ ದಿನ 31.08.2024.

ಅರ್ಜಿ ಸಲ್ಲಿಸಲು ಅರ್ಜಿದಾರರ ಬಳಿ ಇರಬೇಕಾದ ದಾಖಲೆಗಳು ಯಾವವು?

  • ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು.
  • ಮೊಬೈಲ್ ಸಂಖ್ಯೆ ಆಧಾರ್ ಗೆ ಜೋಡಣೆ ಆಗಿರಬೇಕು.
  • ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.

ಅರ್ಹ ಫಲಾನುಭವಿಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button