India
ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಕೌಂಟರ್
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ವೈಷ್ಣೋದೇವಿ ದರ್ಶನಕ್ಕಾಗಿ ತೆರಳುತ್ತಿದ್ದ ಯಾತ್ರಿಗಳನ್ನು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ಬರ್ಬರ ಹತ್ಯೆ ಮಾಡಿದ್ದರು. ಇದರ ಬೆನ್ನಲ್ಲೇ ಭಾರತೀಯ ಸೇನೆ ತಿವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಭಯೋತ್ಪಾದಕರನ್ನು ಹುಡುಕಿ ಕೊಲ್ಲುತ್ತಿದ್ದಾರೆ.
ಇಂದು ಒಂದು ನಿಖರವಾದ ಗುಪ್ತಚರ ಮಾಹಿತಿಯ ಪ್ರಕಾರ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರದ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ, ಹಡಿಪೋರಾ – ಬಾರಾಮುಲ್ಲಾ ಪ್ರದೇಶದಲ್ಲಿ ಅಡಗಿ ಕುಳಿತ ಎರಡು ಉಗ್ರರನ್ನು ನೆಲಕ್ಕೆ ಉರುಳಿಸಿದ್ದಾರೆ.