BengaluruCinemaEntertainment

ದರ್ಶನ್ ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಸಂದೇಶ.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆರೋಪ ಹೊತ್ತುಕೊಂಡು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಪೋಲಿಸರ ಅತಿಥಿಯಾದ ಘಟನೆ ಈಗಾಗಲೇ ಎಲ್ಲರಿಗೂ ತಿಳಿದಿದೆ. ಇವೆಲ್ಲಾ ಗಮನಿಸಿದ ವಿಜಯಲಕ್ಷ್ಮಿ ದರ್ಶನ್ ಅವರು ಈಗ ದರ್ಶನ್ ಅಭಿಮಾನಿಗಳಿಗೆ ಒಂದು ಸಂದೇಶವನ್ನು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಲುಪಿಸಿದ್ದಾರೆ.

“ನನ್ನ ಪ್ರೀತಿಯ ಸಹೋದರರೇ,
ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.

ಸತ್ಯಮೇವ ಜಯತೆ!”

ಸುಖಾಸುಮ್ಮನೆ ಅಭಿಮಾನಿಗಳು ಸಂಕಷ್ಟದಲ್ಲಿ ಸಿಲುಕಬಾರದು ಎಂದು ತೆಗೆದುಕೊಂಡಿರುವ ವಿಜಯಲಕ್ಷ್ಮಿ ದರ್ಶನ್ ಅವರು ಹೆಜ್ಜೆ ನಿಜಕ್ಕೂ ಶ್ಲಾಘನೀಯ.

Show More

Leave a Reply

Your email address will not be published. Required fields are marked *

Related Articles

Back to top button