CinemaEntertainment

ವಿನೋದ್ ಪ್ರಭಾಕರ್ ಅಭಿನಯದ 25ನೇ ಚಿತ್ರ “ಬಲರಾಮನ ದಿನಗಳು” ಬಿಡುಗಡೆಗೆ ಸಿದ್ಧತೆ…?!

ಬೆಂಗಳೂರು: ಕೆ.ಎಂ. ಚೈತನ್ಯ ನಿರ್ದೇಶನದ “ಬಲರಾಮನ ದಿನಗಳು” ಚಿತ್ರಕ್ಕೆ ಸಂಬಂಧಿಸಿದಂತೆ ದೊಡ್ಡ ಪ್ರಕಟಣೆ ಆಗಸ್ಟ್ 23 ರಂದು ಹೊರಬೀಳಲಿದೆ ಎಂದು ಚಿತ್ರತಂಡ ತಿಳಿಸಿದೆ. “ಪದ್ಮಾವತಿ ಫಿಲಂಸ್” ಲಾಂಛನದಲ್ಲಿ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್ ಅವರ ನಿರ್ಮಾಣದಲ್ಲಿ ಮೂಡಿಬರಲಿರುವ ಈ ಚಿತ್ರದಲ್ಲಿ “ಟೈಗರ್” ವಿನೋದ್ ಪ್ರಭಾಕರ್ ತಮ್ಮ 25ನೇ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

“ಆ ದಿನಗಳು” ಖ್ಯಾತಿಯ ಚೈತನ್ಯ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಕೆಲವೇ ದಿನಗಳ ಹಿಂದೆ ಚಿತ್ರದ ಮೊದಲ ಪೋಸ್ಟರ್‌ ಬಿಡುಗಡೆಯಾಗಿತ್ತು. ಈ ಪೋಸ್ಟರ್‌ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈಗ ದೊಡ್ಡ ಪ್ರಕಟಣೆ ಕುರಿತು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ.

ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಎದುರಾಗಿದೆ. ಚೈತನ್ಯ ಮತ್ತು ವಿನೋದ್ ಪ್ರಭಾಕರ್ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಈ ಚಿತ್ರ ಆರಂಭದಲ್ಲಿಯೇ ಬೆಂಬಲ ಪಡೆದುಕೊಂಡಿದೆ. ಟೈಗರ್‌ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಈ ಸುದ್ದಿ ದೊಡ್ಡ ಉತ್ಸಾಹದ ಸಂಗತಿಯಾಗಿದೆ.

Show More

Leave a Reply

Your email address will not be published. Required fields are marked *

Related Articles

Back to top button