Politics
ರೈಲು ಅಪಘಾತಕ್ಕೆ ಕಾರಣ ಕೇಂದ್ರ ಸರ್ಕಾರ?!
ರಂಗಪಾಣಿ: ಪಶ್ಚಿಮ ಬಂಗಾಳದ ರಂಗಪಾಣಿ ಸಮೀಪ ಇಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲಿಗೆ ಗೂಡ್ಸ್ ರೈಲು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದ್ದರಿಂದ, ಕಾಂಚನಜುಂಗಾ ರೈಲಿನ ಮೂರು ಬೋಗಿಗಳು ಹಳಿ ತಪ್ಪಿದೆ. ಸ್ಥಳದಲ್ಲೇ 15 ಜನರು ಮೃತಪಟ್ಟಿದ್ದಾರೆ ಹಾಗೂ 30 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಈ ದುರ್ಘಟನೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ದೂಷಿಸಿದೆ. ಇದರ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜಿನಾಮೆ ನೀಡಬೇಕು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದೆ.
ಈ ಹಿಂದೆ ಒರಿಸ್ಸಾ ರಾಜ್ಯದಲ್ಲಿ ಕೂಡ ರೈಲುಗಳು ಡಿಕ್ಕಿ ಹೊಡೆದು ಅನೇಕ ಪ್ರಯಾಣಿಕರ ಜೀವ ಹಾನಿ ಸಂಭವಿಸಿತ್ತು. ಈ ರೀತಿಯ ಅಪಘಾತಗಳು ಮೇಲಿಂದ ಮೇಲೆ ಸಂಭವಿಸುತ್ತಿರುವುದು ಯಾವ ಕಾರಣಕ್ಕಾಗಿ ಎಂಬುದು ತನಿಖೆ ಮೂಲಕ ತಿಳಿದು ಬರಬೇಕಿದೆ.